ಬೆಂಗಳೂರು : ಕೋವಿಡ್ ತಡೆಗೆ ಸರ್ಕಾರ ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪ್ರತಿನಿತ್ಯ 1,500 ಕೊರೊನಾ ಪರೀಕ್ಷೆ ನಡೆಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಕೇರಳದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಜೆಎನ್.1 ಪತ್ತೆಯಾಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ 1,500 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.