ಮಂಡ್ಯ: ಪ್ರೀತಂ ಗೌಡ ಒಮ್ಮೆ ಶಾಸಕರಾದ ಕೂಡಲೇ ಅವರೇನು ದೇವರಲ್ಲ, ಅವರು ತಮ್ಮ ಇತಿಮಿತಿಯಲ್ಲಿ ಇರಬೇಕು ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ನಾನು ಮೊದಲ ಬಾರಿಗೆ ಸಚಿವನಾದಾಗ ಪ್ರೀತಂ ಗೌಡ ಹುಟ್ಟಿರಲಿಲ್ಲ. ದೇವೇಗೌಡರ ಕುಟುಂಬಕ್ಕೆ 50 ವರ್ಷದ ರಾಜಕೀಯ ಇತಿಹಾಸ ಇದೆ. ನಾನು ಕೂಡ ದೇವೇಗೌಡರ ಮನೆಗೆ ಹೋಗಿದ್ದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಮನೆಗೆ ಭೇಟಿ ನೀಡಿದ್ದಕ್ಕೆ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಆಕ್ಷೇಪಿಸಿದ್ದರು. ಸಿಎಂ ನಡೆ ನೋವು ತಂದಿದೆ. ಸಿಎಂ ದೇವೇಗೌಡರ ಮನೆಗೆ ಭೇಟಿ ನೀಡಿದ್ದರಿಂದ ಪಕ್ಷದ ಕಾರ್ಯಕರ್ತರ ಮೇಲೆ ಪರಿಣಾಮ ಬೀರಿದೆ. ಪಕ್ಷದ ಕಾರ್ಯಕರ್ತರಿಗೆ ನೋವು ತಂದಿದೆ ಎಂದು ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಪ್ರೀತಂ ಗೌಡ ದೇವರಲ್ಲ, ದೇವೇಗೌಡರ ಕುಟುಂಬಕ್ಕೆ 50 ವರ್ಷದ ರಾಜಕೀಯ ಇತಿಹಾಸ ಇದೆ. ನಾನು ಕೂಡ ಅವರ ಮನೆಗೆ ಹೋಗಿದ್ದೆ ಎಂದು ಹೇಳಿದ್ದಾರೆ.