ಕೊಪ್ಪಳ: ಕೊಪ್ಪಳ ತಾಲೂಕಿನ ಗ್ರಾಮವೊಂದರ ಎಂಟನೇ ತರಗತಿ ವಿದ್ಯಾರ್ಥಿನಿ ಆರು ತಿಂಗಳ ಗರ್ಭಿಣಿಯಾಗಿದ್ದು, ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿಯ ಹೇಳಿಕೆಯ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿಗಳದ್ದು, ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ. ಆತಂಕಗೊಂಡ ವಿದ್ಯಾರ್ಥಿನಿ ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಆಕೆಯಲ್ಲಾದ ದೈಹಿಕ ಬದಲಾವಣೆ ಗಮನಿಸಿ ಪೋಷಕರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರು ಪರೀಕ್ಷೆ ನಡೆಸಿ ಆರು ತಿಂಗಳ ಗರ್ಭಿಣಿಯಾಗಿರುವುದನ್ನು ತಿಳಿಸಿದ್ದಾರೆ. ಪೋಷಕರ ಮಾಹಿತಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.