alex Certify ವಿದ್ಯಾರ್ಥಿನಿಯಲ್ಲಿ ದೈಹಿಕ ಬದಲಾವಣೆ: ವಿಚಾರಿಸಿದಾಗ ಬಯಲಾಯ್ತು ಗರ್ಭಿಣಿಯಾದ ವಿಷಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯಲ್ಲಿ ದೈಹಿಕ ಬದಲಾವಣೆ: ವಿಚಾರಿಸಿದಾಗ ಬಯಲಾಯ್ತು ಗರ್ಭಿಣಿಯಾದ ವಿಷಯ

ಕೊಪ್ಪಳ: ಕೊಪ್ಪಳ ತಾಲೂಕಿನ ಗ್ರಾಮವೊಂದರ ಎಂಟನೇ ತರಗತಿ ವಿದ್ಯಾರ್ಥಿನಿ ಆರು ತಿಂಗಳ ಗರ್ಭಿಣಿಯಾಗಿದ್ದು, ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯ ಹೇಳಿಕೆಯ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿಗಳದ್ದು, ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ. ಆತಂಕಗೊಂಡ ವಿದ್ಯಾರ್ಥಿನಿ ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಆಕೆಯಲ್ಲಾದ ದೈಹಿಕ ಬದಲಾವಣೆ ಗಮನಿಸಿ ಪೋಷಕರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರು ಪರೀಕ್ಷೆ ನಡೆಸಿ ಆರು ತಿಂಗಳ ಗರ್ಭಿಣಿಯಾಗಿರುವುದನ್ನು ತಿಳಿಸಿದ್ದಾರೆ. ಪೋಷಕರ ಮಾಹಿತಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...