![](https://kannadadunia.com/wp-content/uploads/2021/07/baby-1605149348.jpg)
ಚಿತ್ರದುರ್ಗ: ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ ಮಂಜುಳಾ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಜನವರಿ 4ರಂದು ಮಂಜುಳಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ಒಂದು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಮಂಜುಳಾ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದು ಗುರುವಾರ ಮನೆಗೆ ಮರಳಿದ್ದಾರೆ.