
ಕೋಲಾರ: ಮಾಲೂರು ಪುರಸಭೆ ಸಂಕೀರ್ಣದಲ್ಲಿರುವ ಶೌಚಾಲಯದಲ್ಲಿ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಶುಕ್ರವಾರ ನಡೆದಿದೆ.
ಉತ್ತರ ಪ್ರದೇಶದ ಗರ್ಭಿಣಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದರು. ಬಿಪಿ ಜಾಸ್ತಿಯಾಗಿದ್ದ ಅವರಿಗೆ ಕೋಲಾರ ಆಸ್ಪತ್ರೆಗೆ ತೆರಳುವಂತೆ ವೈದ್ಯರು ಸೂಚಿಸಿದ್ದಾರೆ. ಕೋಲಾರಕ್ಕೆ ಹೋಗಲು ಆಂಬುಲೆನ್ಸ್ ಬರುವಷ್ಟರಲ್ಲಿ ಮಹಿಳೆ ಶೌಚಾಲಯಕ್ಕೆ ತೆರಳಿದ್ದು, ಅಲ್ಲಿಯೇ ಹೆರಿಗೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.