
ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹಾಸ್ಟೆಲ್ ವೊಂದರಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್ 1 ಸಹಾಯಕ ನಿರ್ದೇಶಕ ಶಿವಣ್ಣ, ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ.
ತುಮಕೂರು ಜಿಲ್ಲೆಯ ಹಾಸ್ಟೆಲ್ ನಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯ ಬಾಲಕಿ 9ನೇ ತರಗತಿ ಓದುತ್ತಿದ್ದಳು. ನಾಲ್ಕೈದು ದಿನಗಳಿಂದ ಆಕೆ ಶಾಲೆಗೆ ಗೈರು ಹಾಜರಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಪೋಷಕರು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷೆ ನಡೆಸಿದಾಗ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ.