ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ. ಈ ವಿಷಯ ಪೊಲೀಸರಿಗೆ ಗೊತ್ತಾಗಿದ್ದು ಸುಮೋಟೊ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ತಾಯಿಯೊಂದಿಗೆ ಮೂಡಿಗೆರೆಯ ಪ್ರಾರ್ಥನಾ ಮಂದಿರಕ್ಕೆ ತೆರಳಿದ್ದ ಬಾಲಕಿಗೆ ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಳಾಗಿದ್ದಾಳೆ. ಆಕೆಯನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಆಸ್ಪತ್ರೆಗೆ ಕಳುಹಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಸಂದರ್ಭದಲ್ಲಿ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಬಾಳೆಹೊನ್ನೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆನ್ನಲಾಗಿದೆ.