
ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಸಮೀಪ ನಡೆದಿದೆ.
ನಮಿತಾ(22) ಮೃತಪಟ್ಟವರು ಎಂದು ಹೇಳಲಾಗಿದೆ. ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ರಸ್ತೆ ದಾಟುವಾಗ ಘಟನೆ ನಡೆದಿದೆ. ಅಪಘಾತದ ಬಳಿಕ ಕೆಎಸ್ಆರ್ಟಿಸಿ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಆಕ್ರೋಶಗೊಂಡ ಸ್ಥಳೀಯರು, ಮೃತರ ಸಂಬಂಧಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.