ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ. ಇದರಿಂದ ಯುವತಿ ಗರ್ಭಿಣಿಯಾಗಿದ್ದು, ವಿಚಾರ ತಿಳಿದ ಮನೆಯವರು ಅಕ್ಕನ ಗಂಡನನ್ನು ವಿಚಾರಿಸಿದಾಗ ಉಡಾಫೆಯಿಂದ ಮಾತನಾಡಿದ್ದಾನೆ. ಇದರಿಂದ ನೊಂದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.