alex Certify ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಬಳ್ಳಾಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು, ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಬೆಂಗಳೂರಿನಲ್ಲಿ ವಾಸವಾಗಿರುವ ಅವರು, ಎಂಟು ತಿಂಗಳ ಗರ್ಭಿಣಿಯಾಗಿದ್ದು, ಚಿತ್ತಾಪುರದ ಸಂಬಂಧಿಕರ ಮನೆಗೆ ಸಹೋದರ ಹಾಗೂ ಸಂಬಂಧಿ ಜೊತೆಗೆ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಕಲಬುರ್ಗಿಗೆ ಪ್ರಯಾಣ ಬೆಳೆಸಿದ್ದರು.

ರೈಲು ಬೆಂಗಳೂರಿನಿಂದ ಯಲಹಂಕ ತಲುಪುವಷ್ಟರಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಲಾಗಿದೆ. ರೈಲ್ವೇ ಇಲಾಖೆ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಲು ಸಿದ್ಧತೆ ಮಾಡಿಕೊಂಡಿದ್ದು, ಗೌರಿಬಿದನೂರು ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಹೆರಿಗೆಯಾಗಿದೆ. ಇಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದು, ಗೌರಿಬಿದನೂರು ತಾಯಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...