ಭೋಪಾಲ್: ಮಧ್ಯ ಪ್ರದೇಶದ ಮುರೇನಾ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈಶಾಚಿಕ ಕೃತ್ಯ ಎಸಗಿದ್ದಾರೆ. 34 ವರ್ಷದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ್ದಾರೆ.
ಶೇಕಡ 80ರಷ್ಟು ಸುಟ್ಟ ಗಾಯಗಳಾಗಿರುವ ಸಂತ್ರಸ್ತೆಯನ್ನು ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಅಂಬಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಲೋಕ್ ಪರಿಹಾರ್ ಮಾಹಿತಿ ನೀಡಿ, ಗರ್ಭಿಣಿಯ ಪತಿ ಅತ್ಯಾಚಾರ ಎಸಗಿದ್ದ ಮಹಿಳೆ ಜೊತೆ ರಾಜಿ ಮಾಡಿಕೊಳ್ಳಲು ಆಕೆಯ ಗ್ರಾಮಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಮಹಿಳೆಯ ಮನೆಯಲ್ಲಿದ್ದ ಮೂವರು ಪುರುಷರು ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ್ದಾರೆ. ಸಂತ್ರಸ್ತೆಯ ಪತಿ ಅತ್ಯಾಚಾರ ಎಸಗಿ ಬಂಧಿತನಾಗಿದ್ದ. ಜಾಮೀನಿನ ಮೇಲೆ ಹೊರಬಂದಿದ್ದಾನೆ. ಮ್ಯಾಜಿಸ್ಟ್ರೇಟ್ ಬಳಿ ಸಂತ್ರಸ್ತೆ ನಡೆದ ಘಟನೆ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.