alex Certify ಹಾಲಿ ಗ್ರಾಹಕರಿಗೆ ಮೊದಲೇ ಪಾವತಿಸಿ ವಿದ್ಯುತ್ ಬಳಸುವ ಪ್ರಿ ಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಇಲ್ಲ: ಹೊಸ, ತಾತ್ಕಾಲಿಕ ಸಂಪರ್ಕಕ್ಕೆ ಅಳವಡಿಕೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲಿ ಗ್ರಾಹಕರಿಗೆ ಮೊದಲೇ ಪಾವತಿಸಿ ವಿದ್ಯುತ್ ಬಳಸುವ ಪ್ರಿ ಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಇಲ್ಲ: ಹೊಸ, ತಾತ್ಕಾಲಿಕ ಸಂಪರ್ಕಕ್ಕೆ ಅಳವಡಿಕೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಹಾಲಿ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ಕಡ್ಡಾಯವಲ್ಲ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ 2024ರ ಮಾರ್ಚ್ 6ರಂದು ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಮತ್ತು ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ. ಹಾಲಿ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಐಚ್ಚಿಕವಾಗಿದೆ ಎಂದು ಹೇಳಿದ್ದಾರೆ.

ವಿದ್ಯುತ್ ಸ್ಮಾರ್ಟ್ ಮೀಟರ್ ಒಂದು ರೀತಿಯಲ್ಲಿ ಮೊದಲೇ ಪಾವತಿಸಿ ವಿದ್ಯುತ್ ಬಳಸುವ ವ್ಯವಸ್ಥೆಯಾಗಿದೆ. ಈ ನೂತನ ವ್ಯವಸ್ಥೆಯಲ್ಲಿ ಮೊಬೈಲ್ ಫೋನ್ ಮಾದರಿಯಲ್ಲಿ ವಿದ್ಯುತ್ ಬಳಕೆಗೆ ಪ್ರಿ ಪೇಯ್ಡ್ ರಿಚಾರ್ಜ್ ಕಾರ್ಡ್ ಪರಿಚಯಿಸಲಾಗುತ್ತಿದೆ. ಗ್ರಾಹಕರು ಪ್ರಿಪೇಯ್ಡ್ ಮೊಬೈಲ್ ಸಿಮ್ ಮಾದರಿಯಲ್ಲಿ ಮೊದಲೇ ಹಣ ಪಾವತಿಸಿ ವಿದ್ಯುತ್ ಸಂಪರ್ಕ ಪಡೆಯಬೇಕಾಗುತ್ತದೆ.

ಪ್ರಿ ಪೇಯ್ಡ್ ಸಿಮ್ ಕಾರ್ಡ್ ಗಳ ರೀತಿಯಲ್ಲಿ ಸ್ಮಾರ್ಟ್ ಮೀಟರ್ ಗಳು ಕಾರ್ಯ ನಿರ್ವಹಿಸುತ್ತವೆ. ಗ್ರಾಹಕರು ಪ್ರಿ ಪೇಯ್ಡ್ ವಿದ್ಯುತ್ ಮೀಟರ್ ಗಳನ್ನು ಆನ್ಲೈನ್ ಮೂಲಕ ಅಥವಾ ಸಮೀಪದ ವಿದ್ಯುತ್ ವಿತರಣಾ ಕಚೇರಿಗಳಲ್ಲಿ ರಿಚಾರ್ಜ್ ಮಾಡಿಸಿ ತಮಗೆ ಬೇಕಾದಷ್ಟು ಯೂನಿಟ್ ಗಳನ್ನು ಪಡೆದುಕೊಳ್ಳಬಹುದಾಗಿದೆ. ಅನೇಕ ರಾಜ್ಯಗಳಲ್ಲಿ ಈಗಾಗಲೇ ಪ್ರಿಪೇಯ್ಡ್ ಸ್ಮಾರ್ಟ್ ವಿದ್ಯುತ್ ಮೀಟರ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...