alex Certify BIG NEWS: 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ; 9 DCPಗಳ ನೇತೃತ್ವದಲ್ಲಿ ಭದ್ರತೆ; ರಾಜಧಾನಿಯಲ್ಲಿ ಪೊಲೀಸರ ಕಟ್ಟೆಚ್ಚರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ; 9 DCPಗಳ ನೇತೃತ್ವದಲ್ಲಿ ಭದ್ರತೆ; ರಾಜಧಾನಿಯಲ್ಲಿ ಪೊಲೀಸರ ಕಟ್ಟೆಚ್ಚರ

ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, 9 ಡಿಸಿಪಿಗಳ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಭದ್ರತೆಗಾಗಿ 1,700 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. 10 KSRP ತುಕಡಿ, 15 ಎಸಿಪಿ, 44 ಪಿಐ, 14 ಪಿಎಸ್ಐ, 77 ಎ ಎಸ್ ಐ, 600 ಕಾನ್ಸ್ ಟೇಬಲ್ ಗಳನ್ನು, 77 ಮಹಿಳಾ ಸಿಬ್ಬಂದಿ, 160 ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

2 ವರ್ಷಗಳ ನಂತರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಚಾಮರಾಜಪೇಟೆ ಮೈದಾನದಲ್ಲಿಯೂ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...