alex Certify BIG BREAKING: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಾಣಾ ಆಯುಕ್ತ, ಜುಲೈ 24ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರ ಅವಧಿ ಮುಗಿಯುತ್ತಿದ್ದು, ಜುಲೈ 25ರೊಳಗೆ ನೂತನ ರಾಷ್ರಪತಿ ಪ್ರಮಾಣವಚನ ಸ್ವೀಕರಿಸಬೇಕಿದೆ. ಜೂನ್ 15ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಎಂದರು.

ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...