ನವದೆಹಲಿ: ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ರಕ್ಷಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ತಾಹಕೂರ್ ಗುರುವಾರ ಹೇಳಿದ್ದಾರೆ.
ಪತ್ರಕರ್ತರ ರಕ್ಷಣೆಗಾಗಿ ನೀತಿ ಚೌಕಟ್ಟುಗಳ ಬಗ್ಗೆ ಪ್ರಶ್ನೆಯನ್ನು ಎತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೋಲಾ ಸೇನ್ ಗೆ ಪ್ರತಿಕ್ರಿಯೆ ನೀಡಿದ ಅನುರಾಗ್ ಠಾಕೂರ್, ಪ್ರತಿಯೊಬ್ಬ ವ್ಯಕ್ತಿಗೂ ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಪತ್ರಿಕಾ ಸ್ವಾತಂತ್ರ್ಯವೂ ಇದೆ ಮತ್ತು ಅದು ಭವಿಷ್ಯದಲ್ಲಿಯೂ ಹಾಗೆಯೇ ಉಳಿಯುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಕರ್ತರ ಸುರಕ್ಷತೆಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಪೂರಕ ಪ್ರಶ್ನೆಗೆ ಪ್ರತಿಕ್ರಿಯಿಸಿದ ಠಾಕೂರ್, ಸದನದಲ್ಲಿ ಇಲ್ಲದ ಪಶ್ಚಿಮ ಬಂಗಾಳದ ಸಂಸದರೊಬ್ಬರು ಮುಖ್ಯ ಪ್ರಶ್ನೆಯನ್ನು ಕೇಳಿದ್ದಾರೆ. ಪತ್ರಕರ್ತರ ಮೇಲಿನ ಹಿಂಸಾಚಾರದ ಹಲವಾರು ಉದಾಹರಣೆಗಳಿಗೆ ಪಶ್ಚಿಮ ಬಂಗಾಳ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.