ಬೆಂಗಳೂರು : ‘ರಾಜ್ಯದಲ್ಲಿ ಡೆಂಘಿ ಜ್ವರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡೆಂಘಿ ಪತ್ತೆ ಹಚ್ಚುವ ಎಲಿಸಾ ಪರೀಕ್ಷೆಗೆ 300 ರೂಪಾಯಿ ಮತ್ತು ರಾಪಿಡ್ ಪರೀಕ್ಷೆಗೆ 250 ರೂಪಾಯಿ ನಿಗದಿಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರಿಗೆ ಹೊರೆಯಾಗದಂತೆ ಖಾಸಗಿ ಆಸ್ಪತ್ರೆಗಳು, ಪ್ರಯೋಗಶಾಲೆಗಳು ಹಾಗೂ ಡಯೋಗ್ನೋಸ್ಟಿಕ್ ಲ್ಯಾಬೋರೇಟರಿಗಳು ಸೇರಿದಂತೆ ರಾಜ್ಯಾದ್ಯಂತ ಏಕರೂಪದ ದರ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಟ್ಸ್ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗಶಾಲೆಗಳು ಡಯಾಗೋಸ್ಟಿಕ್ ಲ್ಯಾಬೋರೇಟರಿಗಳು ಡೆಂಗಿಜ್ವರ ಪತ್ತೆಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ.
ಪ್ರಸ್ತುತ ರಾಜ್ಯದಲ್ಲಿ ಡೆಂಗಿಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮೇಲೆ ಓದಲಾದ ಕ್ರಮಾಂಕ (2)ರನ್ವಯ, ಡೆಂಗಿ ಜ್ವರ ಪತ್ತೆ ಹಚ್ಚುವ ELISA ಹಾಗೂ Rapid ಪರಿಷ್ಕರಿಸಲು ಉದ್ದೇಶಿಸಲಾಗಿರುತ್ತದೆ. ಪ್ರಸ್ತಾವನೆಯಲ್ಲಿ ತಿಳಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಖಾಸಗಿ ಟೆಸ್ಟಿಂಗ್ ಲಾಬ್ಗಳಿಗೆ ಡೆಂಗಿಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದೆ.