ಬೆಂಗಳೂರು: ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ದಾಖಲೆಗೆ ಕೆಂಪೇಗೌಡರ ಪ್ರತಿಮೆ ಪಾತ್ರವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.
ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಯಾಗಿದೆ. 84 ಕೋಟಿ ರೂ. ವೆಚ್ಚದಲ್ಲಿ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ನವೆಂಬರ್ 11 ರಂದು ಉದ್ಘಾಟನೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಪ್ರತಿಮೆಯ ಮುಂಭಾಗ ಮೂರು ಎಕರೆ ಜಾಗದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಿಸಲಾಗುವುದು.
ಕೆಂಪೇಗೌಡರ ಪ್ರಗತಿಯ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರಿದೆ. ಬೆಂಗಳೂರು ಮಹಾನಗರದ ಸಂಸ್ಥಾಪಕ ಕೆಂಪೇಗೌಡರ ಮೊದಲ ಮತ್ತು ಎತ್ತರದ ಕಂಚಿನ ಪ್ರತಿಮೆಯನ್ನು ಅಧಿಕೃತವಾಗಿ ಸಮೃದ್ಧಿ ಪ್ರತಿಮೆ/ ‘ಪ್ರಗತಿಯ ಪ್ರತಿಮೆ’ ಎಂದು ಘೋಷಿಸಲಾಗಿದೆ.