alex Certify ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಾದ್ರಿ ಹೈದರಾಬಾದ್ ನಲ್ಲಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಾದ್ರಿ ಹೈದರಾಬಾದ್ ನಲ್ಲಿ ಅರೆಸ್ಟ್

ದಾವಣಗೆರೆ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಪಾದ್ರಿಯನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ.

ದಾವಣಗೆರೆ ಜಯನಗರ ಚರ್ಚ್ ನ ಪಾದ್ರಿ ರಾಜಶೇಖರನನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ನಲ್ಲಿ ಕಾರ್ಯಾಚರಣೆ ನಡೆಸಿ ರಾಜಶೇಖರನನ್ನು ಬಂಧಿಸಲಾಗಿದೆ. ಕಳೆದ ಒಂದು ವಾರದಿಂದ ಪಾದ್ರಿ ರಾಜಶೇಖರ್ ತಲೆ ಮರೆಸಿಕೊಂಡಿದ್ದ. ಖಚಿತ ಮಾಹಿತಿ ಮತ್ತು ಮೊಬೈಲ್ ಲೊಕೇಷನ್ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಮಹಿಳೆಯೊಬ್ಬರು ಪಾದ್ರಿಯ ವಿರುದ್ಧ ದೂರು ನೀಡಿದ್ದರು. ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನದ ಭೀತಿಯಿಂದ ಪಾದ್ರಿ ರಾಜಶೇಖರ್ ತಲೆಮರೆಸಿಕೊಂಡಿದ್ದ. ಈ ಹಿಂದೆ ಪುತ್ರಿಯೇ ಪಾದ್ರಿ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಅನ್ಯ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಆರೋಪಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...