alex Certify ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಎಲ್ಲಾ ಪಠ್ಯ ಕನ್ನಡದಲ್ಲಿಯೂ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಎಲ್ಲಾ ಪಠ್ಯ ಕನ್ನಡದಲ್ಲಿಯೂ ಲಭ್ಯ

ಬೆಂಗಳೂರು: ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗಿನ ಎಲ್ಲಾ ಹಂತದ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಪಡೆಯಬಹುದಾಗಿದೆ.

ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಡಿಜಿಟಲ್ ರೂಪದಲ್ಲಿ ಎಲ್ಲಾ ಕೋರ್ಸ್ ಗಳ ಪಠ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದು, ಮೂರು ವರ್ಷಗಳು ಗಡುವು ನೀಡಿದೆ. ಇಂಜಿನಿಯರಿಂಗ್, ವೈದ್ಯಕೀಯ, ತಂತ್ರಜ್ಞಾನ ಕೋರ್ಸ್ ಗಳಿಗೂ ಇದು ಅನ್ವಯವಾಗಲಿದೆ.

ಯುಜಿಸಿ, ಎಐಸಿಟಿಇ, ಎನ್.ಸಿ.ಇ.ಆರ್.ಟಿ., ಐಐಟಿ, ಕೇಂದ್ರೀಯ ವಿದ್ಯಾಲಯಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ. ಕೃತಕ ಬುದ್ಧಿಮತ್ತೆ ಆಧಾರಿತ ಅನುವಾದಿನಿ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ಕಳೆದೆರಡು ವರ್ಷಗಳಿಂದ ಪ್ರಾದೇಶಿಕ ಭಾಷೆಗಳಲ್ಲಿ ಪಠ್ಯ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದೆ. ಇಂಜಿನಿಯರಿಂಗ್, ಮೆಡಿಕಲ್, ಕಾನೂನು, ಪದವಿ, ಸ್ನಾತಕೋತ್ತರ ಪದವಿ ಪಠ್ಯಪುಸ್ತಕಗಳನ್ನು ಅನುವಾದಿನಿ ತಂತ್ರಾಂಶದ ಮೂಲಕ ಸಿದ್ಧಪಡಿಸಲಾಗುತ್ತಿದೆ. ಈ ಪುಸ್ತಕಗಳು ಇಕುಂಭ್ ಪೋರ್ಟಲ್ ನಲ್ಲಿ ಲಭ್ಯವಿದೆ. ಶಾಲಾ ಪುಸ್ತಕಗಳನ್ನು ದೀಕ್ಷಾ ಪೋರ್ಟಲ್ ನಲ್ಲಿ 30 ಭಾಷೆಗಳಲ್ಲಿ ನೀಡಲಾಗಿದೆ.

ಕಲಿಕೆಗೆ ಭಾಷೆ ಅಡ್ಡಿಯಾಗಬಾರದು, ಶಿಕ್ಷಣದ ಎಲ್ಲಾ ಹಂತಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಕಲಿಕೆಗೆ ಉತ್ತೇಜನ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸಿನ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಅವರದೇ ಭಾಷೆಯಲ್ಲಿ ಕಲಿಯುವಂತೆ ಅವಕಾಶ ಕಲ್ಪಿಸಲು ಕೇಂದ್ರ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಎಲ್ಲಾ ಭಾಷೆಗಳಲ್ಲಿಯೂ ಕಲಿಕಾ ಸಾಮಗ್ರಿ ಒದಗಿಸಲು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...