alex Certify ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ʻಮುಖ್ಯ ಶಿಕ್ಷಕʼರ ಹುದ್ದೆಗೆ ಬಡ್ತಿ : ಕೌನ್ಸಿಂಗ್ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ʻಮುಖ್ಯ ಶಿಕ್ಷಕʼರ ಹುದ್ದೆಗೆ ಬಡ್ತಿ : ಕೌನ್ಸಿಂಗ್ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

 

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಬಡ್ತಿ ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯದನ್ವಯ, 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಶಿಕ್ಷಕರುಗಳಿಗೆ ಮುಖ್ಯ ಶಿಕ್ಷಕರ (HM) ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿ ಉಲ್ಲೇಖಿತ-9ರಲ್ಲಿ ದಿನಾಂಕ: 09/01/2024ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಆದರೆ ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ‘ಸಿ’ ವೃಂದದ ಹುದ್ದೆಗಳಿಗೆ ಬಡ್ತಿ ನೀಡುವ ಸಂದರ್ಭದಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಹಾಗೂ ಅಂಗವೈಕಲ್ಯತೆಯನ್ನು ಗುರುತಿಸುವ ಬಗ್ಗೆ ಮಾರ್ಗಸೂಚಿ ಹೊರಡಿಸುವ ಪ್ರಕ್ರಿಯೆ ಸರ್ಕಾರದ ಹಂತದಲ್ಲಿ ಚಾಲ್ತಿಯಲ್ಲಿತ್ತು. ಅದರಂತೆ ಎದ್ದುಕಾಣುವ ಅಂಗವೈಕಲ್ಯತೆಯ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಲ್ಲೇಖ-10 ರಲ್ಲಿ ಅಧಿಸೂಚನೆಯನ್ನು ಹೊರಡಿಸಿ ತಜ್ಞರ ಸಮಿತಿಯ ಸಭೆಯಲ್ಲಿ ಗುರುತಿಸಿರುವ ಅಂಗವೈಕಲ್ಯತೆಯ ವರ್ಗಗಳನ್ನು ನಿಗಧಿಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-‘ಸಿ’ ಮತ್ತು ಗ್ರೂಪ್-‘ಡಿ’ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡಾ 4 ರಷ್ಟು ಮೀಸಲಾತಿ ಅವಕಾಶಗಳನ್ನು ಕೆಲವು ಷರತ್ತುಗಳಿಗೊಳಪಟ್ಟು ಕಲ್ಪಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಇಲಾಖೆ/ ನಿಗಮಗಳು/ಮಂಡಳಿ/ಸ್ವಾಯತ್ತ ಸಂಸ್ಥೆಗಳು ಸೇರಿದಂತೆ ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಟ್ಟಿರುವ ಸಂಸ್ಥೆಗಳಲ್ಲಿನ ಯಾವುದೇ ಪೋಷಕ ವೃಂದದ (Feeder Cadre ) ಹುದ್ದೆಗಳಲ್ಲಿ ವಿಕಲ ಚೇತನರು ನಿರ್ವಹಿಸಬಹುದಾದ ಹುದ್ದೆಗಳನ್ನು ಗುರುತಿಸಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಿ ಗುರುತಿಸಲಾಗಿರುವ ಪೋಷಕ ವೃಂದದ (Feeder Cadre) ಹುದ್ದೆಗಳನ್ನೇ ಮುಂಬಡ್ತಿ ಹುದ್ದೆಗಳಿಗೂ ಸಹ ಪರಿಗಣಿಸುವಂತೆ ಹಾಗೂ ನ್ಯಾಯಾಲಯದ ಆದೇಶದನ್ವಯ ನಿಯಮಾನುಸಾರ ಕ್ರಮ ಕೈಗೊಳ್ಳಲು ಉಲ್ಲೆಖಿತ-11ರಲ್ಲಿ ಸರ್ಕಾರದ ನಿರ್ದೇಶನವಿದೆ.

ಈ ಹಿನ್ನೆಲೆಯಲ್ಲಿ ಉಲ್ಲೇಖ-10ರ ಅಧಿಸೂಚನೆಯ ಕೋಷ್ಟಕದಲ್ಲಿ ನಮೂದಾಗಿರುವ ಹುದ್ದೆಗಳು ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವಿವಿಧ ಸ್ಥರದ ಹುದ್ದೆಗಳಾಗಿರುತ್ತದೆ. ಪ್ರಸ್ತುತ ಅಧಿಸೂಚನೆಯಲ್ಲಿ ಗುರುತಿಸಲಾಗಿರುವ ವರ್ಗೀಕರಣಗಳನ್ನು ಕೇವಲ ಆಯಾ ನೇಮಕಾತಿಗೆ ಮಾತ್ರವಲ್ಲದೇ ಪಧವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಗಳಿಗೆ ಬಡ್ತಿಗೆ ಮತ್ತು ಮುಖ್ಯೋಪಾಧ್ಯಾಯರು ಮತ್ತು ಹಿರಿಯ ಮುಖ್ಯ ಶಿಕ್ಷಕರ ವೃಂದಗಳಿಗೆ ಬಡ್ತಿಗಳಿಗೆ ಅದೇ ವರ್ಗೀಕರಣಗಳನ್ನು ಪರಿಗಣಿಸಲು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರು(1-5)ರ ವೃಂದದ ನೇರ ನೇಮಕಾತಿಗಳಿಗೂ ಪಾರಿಗಣಿಸಲಾಗುತ್ತಿರುವುದರಿಂದ ಮುಖ್ಯ ಶಿಕ್ಷಕರ ವೃಂದಕ್ಕೆ (Feeder Cadre) ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ [ಪಿ.ಎಸ್.ಟಿ(1-5)] ಆಗಿರುತ್ತದೆ ಹಾಗೂ ಹಿರಿಯ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿಗೆ (Feeder Cadre) ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ವೃಂದವಾಗಿರುತ್ತದೆ ಆದ್ದರಿಂದ ಈ ಕೆಳಕಂಡ ಕೋಷ್ಟಕದಲ್ಲಿ ನಿಗಧಿಪಡಿಸಿರುವ ಅಂಗವೈಕಲ್ಯತೆಯ ವರ್ಗೀಕರಣ ಮತ್ತು ವಿಧಗಳನ್ನೇ ಬಡ್ತಿಗೆ ಪರಿಗಾಣಿಸಲು ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...