ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಮತಬೇಟೆಗೆ ಸಖತ್ ಪ್ಲ್ಯಾನ್ ಮಾಡುತ್ತಿದೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ.
ಲೋಕಸಭೆ ಚುನಾವಣೆ ಸಿದ್ದತೆ, ಕಾರ್ಯತಂತ್ರಗಳ ಅನುಷ್ಟಾನದ ನಿಟ್ಟಿನಲ್ಲಿ ಈ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. 4 ಲೋಕಸಭೆ ಕ್ಷೇತ್ರಗಳಿಗೆ ಒಂದರಂತೆ ಎಂಟು ಕ್ಲಸ್ಟರ್ ಗಳನ್ನು ಬಿಜೆಪಿ ರಚಿಸಿದೆ. ಪ್ರಧಾನಿ ಮೋದಿ , ಅಮಿತ್ ಶಾ, ಜೆ,ಪಿ ನಡ್ಡಾ ಹಾಗೂ ರಾಜನಾಥ್ ಸಿಂಗ್ ತಲಾ 2 ಕ್ಲಸ್ಟರ್ ಗಳ ಮೇಲ್ವಿಚಾರಣೆ ಮಾಡಲಿದ್ದಾರೆ.