ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಎರಡನೇ ದಿನದ ಅಧಿವೇಶನ ಯಶಸ್ವಿಯಾಗಿ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಸಮಾರೋಪ ಭಾಷಣದ ಮೂಲಕ ಭಾರತದ ರಾಜಧಾನಿ ದೆಹಲಿಯಲ್ಲಿ ನಡೆದ G20 ಶೃಂಗಸಭೆಯು ಮುಕ್ತಾಯಗೊಂಡಿದೆ ಎಂದು ಘೋಷಣೆ ಮಾಡಿದ್ದಾರೆ.
ನವೆಂಬರ್ವರೆಗೆ ಜಿ 20 ಅಧ್ಯಕ್ಷತೆ ಜವಾಬ್ದಾರಿ ಭಾರತಕ್ಕೆ ಇದೆ. ಈ ಎರಡು ದಿನಗಳಲ್ಲಿ, ನೀವು ಹಲವಾರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ ಮತ್ತು ವಿವಿಧ ಪ್ರಸ್ತಾಪಗಳನ್ನು ತಿಳಿಸಲಾಗಿದೆ. ನವೆಂಬರ್ನಲ್ಲಿ ಜಿ 20 ವರ್ಚುವಲ್ ಅಧಿವೇಶನ ಆಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ.
ನಾವು ನವೆಂಬರ್ ಅಂತ್ಯದಲ್ಲಿ G20 ನ ವರ್ಚುವಲ್ ಅಧಿವೇಶನವನ್ನು ನಡೆಸಬೇಕೆಂದು ನಾನು ಪ್ರಸ್ತಾಪಿಸುತ್ತೇನೆ. ಆ ವರ್ಚುವಲ್ ಅಧಿವೇಶನದಲ್ಲಿ ಈ ಶೃಂಗಸಭೆಯಲ್ಲಿ ನಿರ್ಧರಿಸಿದ ವಿಷಯಗಳನ್ನು ನಾವು ಪರಿಶೀಲಿಸಬಹುದು. ನೀವೆಲ್ಲರೂ ವರ್ಚುವಲ್ ಸೆಷನ್ಗೆ ಸೇರುತ್ತೀರಿ ಎಂದು ನಾನು ಭಾವಿಸುತ್ತೇನೆ. ಈ ಮೂಲಕ ನಾನು G20 ಶೃಂಗಸಭೆಯನ್ನು ಮುಕ್ತಾಯಗೊಳಿಸುತ್ತೇನೆ ಎಂದು ಘೋಷಿಸುತ್ತೇನೆ ಎಂದರು.
G20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಿಗೆ ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹಸ್ತಾಂತರ ಮಾಡಿದ್ದಾರೆ.ಜಿ20 ಅಧ್ಯಕ್ಷತೆ ವಹಿಸಿದ್ದ ಭಾರತ ಪ್ರಧಾನಿ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಭಾರತದಿಂದ ಅಧ್ಯಕ್ಷ ಸ್ಥಾನವನ್ನು ಔಪಚಾರಿಕವಾಗಿ ಹಸ್ತಾಂತರಿಸಿದ್ದಾರೆ.