alex Certify BREAKING : ‘ಇಸ್ರೋ’ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ |P. M Modi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಇಸ್ರೋ’ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ |P. M Modi

ಬೆಂಗಳೂರು : ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಗ್ರೀಸ್ ದೇಶದಿಂದ ಪ್ರಧಾನಿ ಮೋದಿ ಇದೀಗ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸಿದ್ದು, ಕೆಲಹೊತ್ತು ಏರ್ ಪೋರ್ಟ್ ನಲ್ಲಿ ವಿಶ್ರಾಂತಿ ಪಡೆದು ನಂತರ ಇಸ್ರೋ ಕೇಂದ್ರಕ್ಕೆ ತೆರಳಲಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ಬಿಜೆಪಿ ಸಿದ್ದವಾಗಿದೆ.

ಚಂದ್ರಯಾನ- 3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಆಗಮಿಸಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.

ಪ್ರಧಾನಿ ವೇಳಾಪಟ್ಟಿ
ಬೆಳಗ್ಗೆ 5.55ಕ್ಕೆ ಎಚ್ಎಎಲ್ ಏರ್ಪೋರ್ಟ್ ಗೆ ಮೋದಿ ಆಗಮನ
• ಬೆಳಗ್ಗೆ 6.30 ರವರೆಗೆ ಏರ್ಪೋರ್ಟ್ ನಲ್ಲಿ ಮೋದಿಗೆ ಸ್ವಾಗತ
• ಬೆಳಗ್ಗೆ 7 ಗಂಟೆಗೆ ಇಸ್ರೊ ಕೇಂದ್ರಕ್ಕೆ ಭೇಟಿ
• ಬೆಳಗ್ಗೆ 8 ಗಂಟೆವರೆಗೆ ಇಸ್ರೊ ಕೇಂದ್ರದಲ್ಲಿ ಸಭೆ
• ಬೆಳಗ್ಗೆ 8.35ಕ್ಕೆ ಬೆಂಗಳೂರಿನಿಂದ ನವದೆಹಲಿಗೆ ವಾಪಸ್

ಭಾರತ ಚಂದ್ರಯಾನ – 3 ರ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಭಾರತದ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದು, ಇಡೀ ವಿಶ್ವವೇ ಈಗ ಭಾರತದತ್ತ ಬೆರಗುಗಣ್ಣಿನಿಂದ ನೋಡುತ್ತಿದೆ. ಈ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಬಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...