ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇದೀಗ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.
ವಿಶೇಷ ವಿಮಾನದ ಮೂಲಕ ಶಿವಮೊಗ್ಗ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿ ನಂತರ ರಸ್ತೆ ಮಾರ್ಗವಾಗಿ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ ಆಗಮಿಸಿದ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಜನರು ನಿಂತಿದ್ದು, ಜೈ ಮೋದಿ..ಜೈ ನಮೋ ಎಂಬ ಘೋಷಣೆ ಮೊಳಗಿಸುತ್ತಿದ್ದಾರೆ. ಮೋದಿಯನ್ನು ಸ್ವಾಗತಿಸಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಮೋದಿ ಸಾಗುವ 10 ಕಿ.ಮೀ ರಸ್ತೆ ಬಂದ್ ಮಾಡಲಾಗಿದ್ದು, ಸಾರ್ವಜನಿಕರ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೂ ರಸ್ತೆ ಬಂದ್ ಮಾಡಲಾಗಿದ್ದು, 11 ಗಂಟೆಯ ಬಳಿಕ ಸಾರ್ವಜನಿಕ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.