ನವದೆಹಲಿ : ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿರುವ ಫಾರ್ಮಾ ಕಂಪನಿಯಲ್ಲಿ ಸಂಭವಿಸಿದ ದುರಂತ ರಿಯಾಕ್ಟರ್ ಸ್ಫೋಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಿ ಕಚೇರಿ (ಪಿಎಂಒ) ಘೋಷಿಸಿದೆ. ಪಿಎಂ ಮೋದಿ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಎಕ್ಸ್ ನಲ್ಲಿ ಹಾರೈಸಿದರು.
“ಅನಕಪಲ್ಲಿಯ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ನೋವುಂಟು ಮಾಡಿದೆ, ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು” ಎಂದು ಪಿಎಂಒ ಪೋಸ್ಟ್ನಲ್ಲಿ ತಿಳಿಸಿದೆ.