alex Certify BREAKING: ಕೆಂಪುಕೋಟೆ ಮೇಲೆ ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆಂಪುಕೋಟೆ ಮೇಲೆ ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ

ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ ದಾಖಲೆ ಸರಿಗಟ್ಟಿದ್ದಾರೆ.

ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಮೋದಿ ಅಲ್ಲಿಂದ ಕೆಂಪುಕೋಟೆಗೆ ಆಗಮಿಸಿದ್ದಾರೆ. ಸೇನಾಪಡೆಗಳಿಂದ ಗೌರವವಂದನೆ ಸ್ವೀಕರಿಸಿದ ಬಳಿಕ ಕೆಂಪು ಕೋಟೆಯ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.

2014ರಿಂದ ಸತತವಾಗಿ 11ನೇ ಬಾರಿಗೆ ಮೋದಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ. ಸೇನಾಪಡೆಗಳಿಂದ ಆಕರ್ಷಕ ಕವಾಯತು ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...