ಕೇರಳ ಪ್ರವಾಸದ ಎರಡನೇ ದಿನವಾದ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾಯೂರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದರ್ಶನ ಪಡೆದರು.
ಬಿಳಿ ಬಣ್ಣದ ಸಾಂಪ್ರದಾಯಿಕ ನಿಲುವಂಗಿಯಲ್ಲಿ ಪ್ರಧಾನಿ ಮೋದಿ ಅವರು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಾರ್ಥನೆ ಸಲ್ಲಿಸಿದ ನಂತರ, ಪಿಎಂ ಮೋದಿ ದೇವಾಲಯದ ಆವರಣದಲ್ಲಿ ಭಕ್ತರನ್ನು ಭೇಟಿಯಾದರು .
ನಂತರ ಪ್ರಧಾನಮಂತ್ರಿಯವರು ತ್ರಿಶೂರ್ ಜಿಲ್ಲೆಯ ತ್ರಿಪ್ರಯಾರ್ ನಲ್ಲಿರುವ ಶ್ರೀ ರಾಮಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಅವರ ಬಹು ನಿರೀಕ್ಷಿತ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ದಿನಾಂಕ ಸಮೀಪಿಸುತ್ತಿರುವ ಸಮಯದಲ್ಲಿ ಪ್ರಧಾನಿಯವರ ತ್ರಿಪ್ರಯಾರ್ ನ ರಾಮ ಸ್ವಾಮಿ ದೇವಾಲಯಕ್ಕೆ ಭೇಟಿ ಮಹತ್ವದ್ದಾಗಿದೆ. ರಾಮಸ್ವಾಮಿ ದೇವಸ್ಥಾನದಲ್ಲಿ ನಡೆದ ‘ಮಲಯಾಳಂ ರಾಮಾಯಣ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಿದ್ದರು.