ಬೆಂಗಳೂರು : ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮತ್ತು ಕೇರಳದ ಪ್ರಗತಿಗಾಗಿ ಕೆಲಸ ಮಾಡಿದ ವಿನಮ್ರ ಮತ್ತು ಸಮರ್ಪಿತ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ. ಅವರೊಂದಿಗಿನ ನನ್ನ ವಿವಿಧ ಸಂವಾದಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ, ಈ ಸಮಯದಲ್ಲಿ ಅವರ ಕುಟುಂಬಕ್ಕೆ ಅವರ ಸಾವಿನ ದುಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ, ಉಮ್ಮನ್ ಚಾಂಡಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
‘ಉಮ್ಮನ್ ಚಾಂಡಿ ಅವರು ಆದರ್ಶಪ್ರಾಯ ತಳಮಟ್ಟದ ಕಾಂಗ್ರೆಸ್ ನಾಯಕರಾಗಿದ್ದರು. ಕೇರಳದ ಜನರು ಅವರ ಸೇವೆಯನ್ನು ಸದಾ ಸ್ಮರಿಸುತ್ತಾರೆ. ನಾವು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅವರ ಎಲ್ಲಾ ಪ್ರೀತಿಪಾತ್ರರಿಗೆ ಸಂತಾಪಗಳು’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.