ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೊದಲ ಕಂತು 1 ಲಕ್ಷ ಹಣವನ್ನು ಪ್ರಧಾನಿ ಮೋದಿ ಇಂದು ಬಿಡುಗಡೆ ಮಾಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ (ಜನವರಿ 15) ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (ಪಿಎಂ-ಜನಮಾನ್) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (ಪಿಎಂಎವೈ – ಜಿ) ನ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಪಿಎಂ-ಜನಮಾನ್ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. 2023 ರ ನವೆಂಬರ್ 15 ರಂದು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಪಿಎಂ-ಜನಮಾನ್ ಅನ್ನು ಪ್ರಾರಂಭಿಸಲಾಯಿತು.