ಮುಂಬೈ: ಮುಂಬೈನ ಗೋರೆಗಾಂವ್ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಗಾಯಗೊಂಡಿದ್ದಾರೆ.
ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, 35 ದ್ವಿಚಕ್ರ ವಾಹನಗಳು ಮತ್ತು ಸುಮಾರು 5 ಕಾರುಗಳು ಜಖಂಗೊಂಡಿವೆ. ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಹೇಳಿದರು.ಘಟನೆಯ ಬಗ್ಗೆ ಮಾಹಿತಿ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಈ ಮೂಲಕ ಒಟ್ಟು 7 ಲಕ್ಷ ಪರಿಹಾರ ಸಿಗಲಿದೆ.
ಅಧಿಕಾರಿಗಳು ಸ್ಥಳಕ್ಕೆ ತಲುಪಿದ ಕೂಡಲೇ ಅಗ್ನಿಶಾಮಕ ಕಾರ್ಯಾಚರಣೆ ಪ್ರಾರಂಭವಾಯಿತು ಮತ್ತು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಸ್ಥಳೀಯರ ಪ್ರಕಾರ, ಪಾರ್ಕಿಂಗ್ ಪ್ರದೇಶದಲ್ಲಿದ್ದ ಬಟ್ಟೆಗೆ ಬೆಂಕಿ ಹೊತ್ತಿಕೊಂಡಿದ್ದು, ನಂತರ ಬೆಂಕಿ ಇಡೀ ಪ್ರದೇಶಕ್ಕೆ ಹರಡಿತು.ಬೆಂಕಿಯ ನಿಖರ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.