ಬೆಂಗಳೂರು : ಏ.14 ಕ್ಕೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಏಪ್ರಿಲ್ 14ರಂದು ಮಂಗಳೂರಿನಲ್ಲಿ ಸಮಾವೇಶ ನಡೆಸಲಿರುವ ಪ್ರಧಾನಿ ಮೋದಿ ನಂತರ ಸಂಜೆ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಮೊದಲು ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶ ಮಂಗಳೂರಿಗೆ ಶಿಫ್ಟ್ ಆಗಿದೆ.
ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ಸುಮಾರು 10 ಕಿ.ಮೀ ದೂರ ರೋಡ್ ಶೋ ನಡೆಸುವ ಸಾಧ್ಯತೆ ಇದೆ.ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಮಧ್ಯಾಹ್ನ 3 ಗಂಟೆಗೆ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕ ವಿ.ಸುನಿಲ್ ಕುಮಾರ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರ ದಾಖಲೆಯನ್ನು ಮೀರಿಸುವ ಸಾಧ್ಯತೆ ಇದೆ.
ಏತನ್ಮಧ್ಯೆ, ಏಪ್ರಿಲ್ 15 ರಿಂದ 17 ರವರೆಗೆ ಪಕ್ಷದ ರಾಜ್ಯ ಅಧ್ಯಕ್ಷರು ಮತ್ತು ಶಾಸಕರು ಮತ್ತು ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ಪ್ರಮುಖ ನಾಯಕರು ಮನೆ ಮನೆ ಪ್ರಚಾರದ ಭಾಗವಾಗಿ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಇದು ನಡೆಯಲಿದೆ. ಏಪ್ರಿಲ್ 10 ಮತ್ತು 11 ರಂದು ರಾಜ್ಯಾದ್ಯಂತ 58,000 ಬೂತ್ ಗಳಲ್ಲಿ ಬೂತ್ ಮಟ್ಟದ ಮಹಾ ಪ್ರಚಾರ ಅಭಿಯಾನ ನಡೆಯಲಿದೆ. ಚುನಾವಣಾ ಪ್ರಚಾರವು ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ ಮತ್ತು ವಿಕಾಸಿತ ಭಾರತವನ್ನು ಕೇಂದ್ರೀಕರಿಸುತ್ತದೆ.