alex Certify ಬಿಜೆಪಿಗೆ ಪ್ರಚಂಡ ಜಯ: ಸಂಭ್ರಮಾಚರಣೆಗೆ ಬಂದ ಮೋದಿಗೆ ಅದ್ದೂರಿ ಸ್ವಾಗತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಪ್ರಚಂಡ ಜಯ: ಸಂಭ್ರಮಾಚರಣೆಗೆ ಬಂದ ಮೋದಿಗೆ ಅದ್ದೂರಿ ಸ್ವಾಗತ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಪ್ರಚಂಡ ಜಯಭೇರಿ ಬಾರಿಸಿದೆ. ಅದರಲ್ಲಿಯೂ ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಮಹತ್ವದ್ದಾಗಿದೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಭರ್ಜರಿ ಗೆಲುವಿನೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಇದರೊಂದಿಗೆ ಉತ್ತರಾಖಂಡ್, ಮಣಿಪುರ, ಗೋವಾದಲ್ಲಿಯೂ ಭರ್ಜರಿ ಜಯ ಗಳಿಸಿದೆ. ಗೆಲುವಿಗೆ ಕಾರಣರಾದವರೆಲ್ಲರಿಗೂ ಮೋದಿ ಧನ್ಯವಾದ ಹೇಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...