
ನವದೆಹಲಿ: ದೇಶದ ಜನೆತೆಗ ಪ್ರಧಾನಿ ಮೋದಿ ಅವರು ಯುಗಾದಿ ಮತ್ತು ಚೈತ್ರ ನವರಾತ್ರಿ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರಿಗೆ ಹೊಸ ವರ್ಷದ ಶುಭಾಶಯಗಳು. ಈ ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಆರೋಗ್ಯದಿಂದ ತುಂಬಲಿ ಎಂದು ನಾನು ಬಯಸುತ್ತೇನೆ.” ಎಂದು ತಿಳಿಸಿದ್ದಾರೆ.
“ದೇಶದಲ್ಲಿರುವ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ನಾನು ನವರಾತ್ರಿಯ ಶುಭಾಶಯಗಳನ್ನು ಕೋರುತ್ತೇನೆ. ಶಕ್ತಿಯ ಆರಾಧನೆಯ ಈ ಮಹಾನ್ ಹಬ್ಬವು ಎಲ್ಲರಿಗೂ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಜೈ ಮಾತಾ ದಿ!” ಎಂದು ಟ್ವೀಟ್ ಮಾಡಿದ್ದಾರೆ.