ನವದೆಹಲಿ: ಜಮ್ಮ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.
ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಕಸಿತ್ ಭಾರತ ವಿಕಸಿತ್ ಜಮ್ಮು ಮತ್ತು ಕಾಶ್ಮೀರ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸುವರು. ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ,ಆರ್ಥಿಕತೆ ಉತ್ತೇಜನಕ್ಕೆ ಸುಮಾರು 5000 ಕೋಟಿ ರೂ. ಯೋಜನೆ ಸಹಿತ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
2019 ರಲ್ಲಿ ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ನಿರ್ಧಾರ ಕೈಗೊಂಡಿತ್ತು. ಇದಾದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಇಂದು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ.