ರಾಮನಗರ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚನ್ನಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ.
ಸತೀಶ್ ಬಂಧಿತ ಆರೋಪಿ. ಪಾವಗಡ ಮೂಲದ ಬಾಲಕಿ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದು, ಶನಿವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಔಷಧ ಪಡೆಯಲು ಪ್ರಾಂಶುಪಾಲರ ಬಳಿಗೆ ಹೋಗಿದ್ದಾಳೆ. ಆಗ ಪ್ರಾಂಶುಪಾಲ ಸತೀಶ್ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಬಾಲಕಿ ದೂರವಾಣಿ ಮೂಲಕ ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಶಾಲೆಯ ಬಳಿ ಬಂದು ಗಲಾಟೆ ನಡೆಸಿದ್ದಾರೆ. ಚನ್ನಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೆಂಗೇರಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.