alex Certify ‘ನಿರುದ್ಯೋಗ ಭತ್ಯೆ’ಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಆದ್ಯತೆ : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಿರುದ್ಯೋಗ ಭತ್ಯೆ’ಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಆದ್ಯತೆ : CM ಸಿದ್ದರಾಮಯ್ಯ

ಶಿವಮೊಗ್ಗ : ‘ನಿರುದ್ಯೋಗ ಭತ್ಯೆ’ಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಿದ್ದ ಯುವನಿಧಿ ಯೋಜನೆಗೆ  ಚಾಲನೆ ನೀಡಿದ ಅವರು ರಾಷ್ಟ್ರೀಯ ಯುವದಿನದ ಅಂಗವಾಗಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

ಯಾವ ಸಮಾಜ ಹಸಿದವರಿಗೆ ಅನ್ನ ನೀಡುವುದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ಇಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದರು. ಅವರ ಜನ್ಮದಿನವಾದ ಇಂದು ಯುವಕ ಯುವತಿಯರು ಸಾಮಾಜಿಕ,ಆರ್ಥಿಕವಾಗಿ ಭ್ರಮನಿರಸವಾಗಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವನಿಧಿ ಕಾರ್ಯಕ್ರಮ ಮೂಲಕ ಶಕ್ತಿ ತುಂಬುವ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಂವಿಧಾನದ ಆಶಯ ,ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಸುಮಾರು 1.5 ಕೋಟಿ ಕುಟುಂಬಗಳು ಸರ್ಕಾರದಿಂದ ಪ್ರತಿ ತಿಂಗಳು ಸರಾಸರಿ 5 ರಿಂದ 6 ಸಾವಿರ ರೂ.ಧನ ಸಹಾಯ ಪಡೆಯುತ್ತಿವೆ.ಇದನ್ನು ಜಾಗತಿಕ ಮೂಲ ಆದಾಯ ಎಂದು ವಿದೇಶಗಳಲ್ಲಿ ಕರೆಯಲಾಗುತ್ತದೆ.ಸಾಮಾಜಿಕ,ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ದೇಶದ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ.ಈ ವಿಚಾರಗಳಲ್ಲಿ ನಂಬಿಕೆಯಿಟ್ಟುಕೊಂಡು ಅಸಮಾನತೆ ನಿವಾರಿಸುವ ನಿಟ್ಟಿನಲ್ಲಿ ನಾವು ಪ್ರಯತ್ನಕ್ಕೆ ಕೈ ಹಾಕಿದ್ದೇವೆ.ಇಲ್ಲವಾದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಅಸಮಾನತೆಯಿಂದ ನರಳುವ ಜನ ಪ್ರಭುತ್ವದ ವಿರುದ್ಧ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದರು.ನಮ್ಮ ಸರ್ಕಾರ ಎಚ್ಚರಿಕೆಯಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ.ಸಂವಿಧಾನದ ಆಶಯ,ಧ್ಯೇಯೋದ್ದೇಶಗಳನ್ನು ಈಡೇರಿಸುವ ಕಾರ್ಯಕ್ಕೆ ನಾವು ಬದ್ಧರಾಗಿದ್ದೇವೆ.

ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡುತ್ತೇವೆ ಎಂದು ಹೇಳಿರಲಿಲ್ಲ.ಐದು ವರ್ಷದ ಕಾಲಾವಕಾಶ ನಮಗಿತ್ತು.ನಮ್ಮ ನಾಡಿನ ಬಡವರು,ಹಿಂದುಳಿದವರು,ಮಹಿಳೆಯರು ಈ ಬೆಲೆ ಏರಿಕೆಯ ಕಾಲದಲ್ಲಿ ಅವರ ಕೊಂಡುಕೊಳ್ಳುವ ಸಾಮಥ್ರ್ಯ ಹೆಚ್ಚಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಅಧಿಕಾರಕ್ಕೆ ಬಂದ ಕೂಡಲೇ ಈ ಎಲ್ಲಾ ಐದು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ಯುವನಿಧಿ ಕಾರ್ಯಕ್ರಮದ ಮೂಲಕ 2023 ರಲ್ಲಿ ಪದವಿ ಉತ್ತೀರ್ಣರಾದ ಅರ್ಹರಿಗೆ 3000 ,ಡಿಪೆÇ್ಲೀಮಾ ಉತ್ತೀರ್ಣರಾದವರಿಗೆ 1500 ರೂ.ಮಾಸಿಕ ಭತ್ಯೆಯನ್ನು ನೀಡುತ್ತಿರುವುದು ಯುವಜನರ ಬದುಕು ರೂಪಿಸಿಕೊಳ್ಳಲು ನೆರವಾಗಲಿದೆ ಎಂದರು.

ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ಕಳೆದ ಜೂನ್ 11 ರಿಂದ ಇಲ್ಲಿಯವರೆಗೆ 130 .28 ಕೋಟಿ ರೂ.ವೆಚ್ಚದಲ್ಲಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ.ಇದೊಂದು ಚಾರಿತ್ರಿಕ ಮಹತ್ವದ ಬೆಳವಣಿಗೆಯಾಗಿದೆ.ಗೃಹಜ್ಯೋತಿ ಯೋಜನೆ ಮೂಲಕ 1.65 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿವೆ.ಗೃಹಲಕ್ಷ್ಮಿ ಕಾರ್ಯಕ್ರಮದಡಿ 1.18 ಲಕ್ಷ ಕುಟುಂಬದ ಮಹಿಳಾ ಯಜಮಾನತಿಯರಿಗೆ ಪ್ರತಿ ತಿಂಗಳು ತಲಾ 2 ಸಾವಿರ ರೂ.ದೊರೆಯುತ್ತಿದೆ.ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ ಅಕ್ಕಿಯ ಜೊತೆಗೆ ಉಳಿದ ಐದು ಕೆಜಿ ಅಕ್ಕಿಯ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ ಎಂದರು.

ಇಂದು ಯುವನಿಧಿ ಮೂಲಕ ಭತ್ಯೆ ಜೊತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಮೇಳದ ಮೂಲಕ ಕೆಲಸ ಕೊಡಿಸುವ ಕಾರ್ಯವನ್ನೂ ಮಾಡುತ್ತೇವೆ.ನಿರುದ್ಯೋಗ ಸಮಸ್ಯೆ ನಿವಾರಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ.2022-23 ರಲ್ಲಿ 3.96 ಲಕ್ಷ ವಿದ್ಯಾರ್ಥಿಗಳು ಪದವಿ ಹಾಗೂ 18 ಲಕ್ಷ ವಿದ್ಯಾರ್ಥಿಗಳು ಡಿಪೆÇ್ಲೀಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿದ್ದಾರೆ.ಅವರೆಲ್ಲ ಈ ಯೋಜನೆಯಡಿ ನೋಂದಾಯಿಸಿಕೊಂಡು ಯುವನಿಧಿ ಸೌಲಭ್ಯ ಪಡೆಯಬೇಕು ಎಂದರು.

ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿದ್ದ ಈ ಪ್ರದೇಶದಲ್ಲಿದ್ದ ಹಳೆಯ ಜೈಲು ಕಟ್ಟಡ ತೆರವುಗೊಳಿಸಿ ಫ್ರೀಡಂ ಪಾರ್ಕ್ ಎಂದು ಕರೆದಿದ್ದೇವೆ.ಈ ಜಿಲ್ಲೆಯಲ್ಲಿ ಜನಿಸಿದ 12 ನೇ ಶತಮಾನದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಈ ಆವರಣಕ್ಕೆ ಇರಿಸುವುದು ಸೂಕ್ತ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...