ಯುವ ಕ್ರಿಕೆಟಿಗ ಪೃಥ್ವಿ ಶಾ ರಣಜಿ ಟ್ರೋಫಿಯಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗೌಹಾಟಿಯಲ್ಲಿ ನಡೆದ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಪೃಥ್ವಿ ಶಾ, 377 ರನ್ ಬಾರಿಸಿ ಅಜೇಯರಾಗುಳಿದಿದ್ದಾರೆ. ಈ ಮೂಲಕ 31 ವರ್ಷಗಳ ಹಿಂದಿನ ದಾಖಲೆಯನ್ನು ಪುಡಿಗಟ್ಟಿದ್ದಾರೆ.
1990 – 91ರ ಸಾಲಿನ ರಣಜಿ ಪಂದ್ಯದಲ್ಲಿ ಸಂಜಯ್ ಮಂಜ್ರೇಕರ್ 377 ರನ್ ಗಳಿಸಿದ್ದು, ರಣಜಿ ಪಂದ್ಯದಲ್ಲಿ ವೈಯಕ್ತಿಕವಾಗಿ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬುದು ಈವರೆಗಿನ ದಾಖಲೆಯಾಗಿತ್ತು. ಇದೀಗ ಪೃಥ್ವಿ ಶಾ ಈ ದಾಖಲೆಯನ್ನು ಮುರಿದಿದ್ದಾರೆ.
ಪೃಥ್ವಿ ಶಾ ಇತ್ತೀಚೆಗೆ ಗಮನಾರ್ಹ ಸಾಧನೆ ಮಾಡದ ಕಾರಣ ಅವರು ಟೀಮ್ ಇಂಡಿಯಾ ತಂಡಕ್ಕೆ ಆಯ್ಕೆಯಾಗಲು ಸಾಧ್ಯವಾಗಿರಲಿಲ್ಲ. ಇದೀಗ ತಮ್ಮ ಈ ದಾಖಲೆಯ ಮೂಲಕ ಆಯ್ಕೆಗಾರರ ಗಮನ ಸೆಳೆದಿದ್ದಾರೆ.