ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ಕೇಸು ದಾಖಲಾಗಿದೆ.
ದರ್ಶನ್ ವಿರುದ್ಧ ರೇಣುಕಮ್ಮ ಅವರು ಖಾಸಗಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(ಎ), 509, 298, 504ರ ಅಡಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 295(ಎ) ಉದ್ದೇಶಪೂರ್ವಕವಾಗಿ ಹೇಳಿಕೆ ನೀಡುವುದು, 509 ಮಹಿಳೆಯರನ್ನು ಅವಮಾನಿಸುವ ಉದ್ದೇಶ, 298 ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು, 504 ಶಾಂತಿಭಂಗಕ್ಕೆ ಪ್ರಚೋದನೆ ನೀಡುವುದರ ಬಗ್ಗೆ ಕೇಸ್ ದಾಖಲಾಗಿದೆ.
ದೂರುದಾರೆ ರೇಣುಕಮ್ಮ ಪರ ವಕೀಲ ರಂಗನಾಥ ವಾದ ಮಂಡಿಸಿದ್ದಾರೆ. ಮಾರ್ಚ್ 1ಕ್ಕೆ 37ನೇ ಎಸಿಎಂಎಂ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.