ಬೆಂಗಳೂರು: ಪ್ರಸಕ್ತ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗುತ್ತದೆ.
10 ಕ್ಕೂ ಹೆಚ್ಚು ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವರ್ಚಯಲ್ ಮೂಲಕ ಸಭೆ ನಡೆಯಲಿದ್ದು, ಖಾಸಗಿ ಶಾಲೆಗಳ ಶುಲ್ಕ ನಿಗದಿ, ಆನ್ಲೈನ್ ಕ್ಲಾಸ್, ಆರ್.ಟಿ.ಇ. ಬಾಕಿ ಹಣ, ಕಳೆದ ವರ್ಷದ ಶುಲ್ಕ ಪಾವತಿ, ಪೋಷಕರೊಂದಿಗೆ ಸಮನ್ವಯತೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ಶುಲ್ಕ ವಿಚಾರದಲ್ಲಿ ಗೊಂದಲ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.