ಬೆಂಗಳೂರು: ಶುಲ್ಕನಿಗದಿ ಖಾಸಗಿ ಶಿಕ್ಷಣ ಸಂಸ್ಥೆಗಳ ಹಕ್ಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಸರ್ಕಾರ ನಿಗದಿಪಡಿಸಿದ ಶುಲ್ಕ ಹೊರತಾಗಿ ಬೇರೆ ಉದ್ದೇಶಗಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳು ಶುಲ್ಕ ಪಡೆಯುವುದನ್ನು ನಿಷೇಧಿಸುವ ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್ 48 ಅಸಂವಿಧಾನಿಕ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಈ ಆದೇಶದಿಂದಾಗಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶುಲ್ಕ ವಿಧಿಸುವುದರ ಮೇಲಿನ ಸರ್ಕಾರದ ನಿಯಂತ್ರಣ ಕೈತಪ್ಪುತ್ತದೆ. ರಾಜ್ಯ ಸರ್ಕಾರಕ್ಕೆ ಇದರಿಂದ ತೀವ್ರ ಹಿನ್ನಡೆಯಾಗಿದ್ದು, ಖಾಸಗಿ ಶಾಲೆಗಳಿಗೆ ಮೊದಲ ಹಂತದ ಕಾನೂನು ಹೋರಾಟದಲ್ಲಿ ಜಯ ಸಿಕ್ಕಂತಾಗಿದೆ.
ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್, ಕರ್ನಾಟಕ ಸ್ವತಂತ್ರ ಸಿಬಿಎಸ್ಇ ಶಾಲೆಗಳ ಸಂಘ, ಇಂಟರ್ನ್ಯಾಷನಲ್ ಸ್ಕೂಲ್ ಅಸೋಸಿಯೇಷನ್ ಮತ್ತು ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸೇರಿದಂತೆ ಹಲವು ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಇ.ಎ.ಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠದಲ್ಲಿ ನಡೆದು ಈ ಆದೇಶ ನೀಡಲಾಗಿದೆ.