ದಾವಣಗೆರೆ : ‘ಖಾಸಗಿ ವಿಡಿಯೋ’ ವೈರಲ್ ಆಗಿದ್ದಕ್ಕೆ ಮನನೊಂದು ಇಬ್ಬರು ವಿದ್ಯಾರ್ಥಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ಏಕಾಂತದಲ್ಲಿ ತೊಡಗಿದ್ದರು . ಇದನ್ನು ನೋಡಿದ ಯಾರೋ ವಿಡಿಯೋ ಮಾಡಿ ವೈರಲ್ ಮಾಡಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಮನನೊಂದು ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೂರಟ್ಟಿ ತಾಂಡಾದ ರತನ್ (20) ಹಾಸ್ಟೆಲ್ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಗೆಯೇ ತುಂಬಿಗೆರೆ ಗ್ರಾಮದ ಯುವತಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೋ ವೈರಲ್ ಮಾಡಿದವರ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.