alex Certify ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಆಸ್ತಿಗಳ ಇ -ಸ್ವತ್ತು ದಾಖಲೆ ವಿತರಣೆ ಲೋಪ ಸರಿಪಡಿಸಲು ಸಚಿವ ಖರ್ಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಆಸ್ತಿಗಳ ಇ -ಸ್ವತ್ತು ದಾಖಲೆ ವಿತರಣೆ ಲೋಪ ಸರಿಪಡಿಸಲು ಸಚಿವ ಖರ್ಗೆ ಸೂಚನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳು ವಿತರಿಸುತ್ತಿರುವ ಇ- ಸ್ವತ್ತು ದಾಖಲೆ ವಿತರಣೆಯಲ್ಲಿ ಸಾಕಷ್ಟು ಲೋಪ ಕಂಡು ಬಂದಿದ್ದು, ಇದಕ್ಕೆ ಕಾರಣವಾದ ಕೇಂದ್ರ ಸರ್ಕಾರ ಎನ್ಐಸಿ ಸೇವೆ ಸುಧಾರಿಸಲು ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.

ಇ- ಸ್ವತ್ತು ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ- ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪರ್ಯಾಯ ಕ್ರಮ ಕೈಗೊಂಡು ವಿಳಂಬವಿಲ್ಲದೆ ಇ- ಸ್ವತ್ತು ದಾಖಲೆಗಳನ್ನು ನೀಡುವಂತೆ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಎನ್ಐಸಿ ಸಂಸ್ಥೆ ತಂತ್ರಜ್ಞಾನ ಅಳವಡಿಕೆಯಲ್ಲಿ ಬಹಳ ಹಿಂದೆ ಇದೆ. ಇದರಿಂದ ಗ್ರಾಮೀಣ ರೈತರಿಗೆ ತೊಂದರೆಯಾಗಿದೆ. ಇ- ಸ್ವತ್ತು ನೀಡಿಕೆಯಲ್ಲಿ ಆಗುತ್ತಿರುವ ವಿಳಂಬ ಕಾರಣ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...