ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವ ʼಹೊಂಬೆಳಕುʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ವರ್ಷದ ಬಜೆಟ್ ನಲ್ಲಿ ಘೋಷಿಸಿದಂತೆ ಹೊಂಬೆಳಕು ಯೋಜನೆ ಜಾರಿಗೆ ತರಲಾಗಿದ್ದು, ಕಾರ್ಯಕ್ರಮಕ್ಕೆ 25 ಕೋಟಿ ವೆಚ್ಚ ಮಾಡಲಾಗುತ್ತದೆ. ಪರಿಸರ ಸ್ನೇಹಿ ಸೌರ ಬೀದಿ ದೀಪಗಳನ್ನು ಅಳವಡಿಕೆ ಮಾಡುವುದರಿಂದ ಗ್ರಾಪಂಗಳಿಗೆ ವಿದ್ಯುತ್ ವೆಚ್ಚದ ಹೊರೆ ಕಡಿಮೆಯಾಗುತ್ತದೆ. ಈ ವರ್ಷ ಸುಮಾರು 16500 ಸೋಲಾರ್ ಬೀದಿ ದೀಪ ಅಳವಡಿಸುವ ಗುರಿಯಿದೆ ಎಂದು ತಿಳಿಸಿದ್ದಾರೆ.