ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಾರ್ಚ್ 10 ರೊಳಗೆ ಬಜೆಟ್ ಮಂಡನೆಗೆ ಸರ್ಕಾರ ಸೂಚನೆ ನೀಡಿದೆ.
ಎಲ್ಲಾ ಗ್ರಾಮಗಳು 2024- 25 ನೇ ಸಾಲಿನ ಪಂಚಾಯಿತಿ ಬಜೆಟ್ ಗಳನ್ನು ಕಡ್ಡಾಯವಾಗಿ ಸಿದ್ಧಪಡಿಸಿ ಮಾರ್ಚ್ 10 ರೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಂಚಾಯಿತಿ ಅಧ್ಯಕ್ಷರುಗಳಿಗೆ ಪತ್ರ ಬರೆದಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಯಡಿ ದೊರೆಯುವ ಅನುದಾನ ಜೊತೆಗೆ ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶ ಇರುವುದರಿಂದ ಎಲ್ಲಾ ಮೂಲಗಳನ್ನು ಕ್ರೋಢೀಕರಿಸಿ ಪಂಚಾಯಿತಿಗಳಲ್ಲಿ ಆಯವ್ಯಯ ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಬೇಕು. ಅನುಮೋದನೆಯಾದ ಬಜೆಟ್ ಅನ್ನು ತಾಲೂಕು ಪಂಚಾಯಿತಿಗೆ ಕಳುಹಿಸಿಕೊಡಬೇಕು ಎಂದು ತಿಳಿಸಿದ್ದಾರೆ.