ಬೆಂಗಳೂರು: ಆದ್ಯತೆಯ ಮೇರೆಗೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿರುವುದರಿಂದ ಬರ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 600 ಕೋಟಿ ರೂ. ಲಭ್ಯವಿದೆ. ಕುಡಿಯುವ ನೀರಿಗಾಗಿ ತಲಾ 25 ಲಕ್ಷ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.