ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ಸೇವಾ ನಿಯಮ ರೂಪಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವರ್ಗಾವಣೆ ನಿಯಮ ರೂಪಿಸುವ ಕುರಿತಾಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಸಲಹೆ ಸೂಚನೆ ನೀಡಿದ ಅವರು, ಈ ಮೂಲಕ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲಾಗುವುದು ಎಂದು ಹೇಳಿದ್ದಾರೆ,
ನಾನು ಖಾತೆ ವಹಿಸಿಕೊಂಡ ಆರಂಭದಲ್ಲಿಯೇ ಪಿಡಿಒ ಮತ್ತು ಪಂಚಾಯಿತಿ ಕಾರ್ಯದರ್ಶಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಕೌನ್ಸೆಲಿಂಗ್ ಪದ್ಧತಿ ಜಾರಿಗೆ ತರುವುದಾಗಿ ಹೇಳಿದ್ದು, 2024-25ನೇ ಸಾಲಿನಲ್ಲಿ ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡಲು ನಿಯಮ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.