ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಏನೇ ಮಾಡಿದರೂ ನಾನು ರಾಜಿನಾಮೆ ಕೊಡಿವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ನನಗು ಯಾವುದೇ ಸಂಬಂಧವಿಲ್ಲ. ಡೆತ್ ನೋಟ್ ನಲ್ಲಿ ನನ್ನ ಹೆಸರೂ ಇಲ್ಲ. ಬಿಜೆಪಿಯವರು ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದು, ಇದಕ್ಕೆ ಅರ್ಥವಿಲ್ಲ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಇಲ್ಲಸಲ್ಲದ ಮಾತನಾಡಿ ಮರ್ಯಾದೆ ಕಳೆದುಕೊಳ್ಳುವುದು ಬೇಡ. ಮಣಿಕಂಠ ರಾಠೋಡ್ ವಿಚಾರದಲ್ಲಿಯೂ ಇದೇ ಬಿಜೆಪಿ ನಾಯಕರು ಕಲಬುರಗಿಗೆ ಬಂದು ನನ್ನ ರಾಜೀನಾಮೆ ಕೇಳಿದ್ದರು. ಆಮೇಲೆ ಏನಾಯ್ತು? ಈ ಬಗ್ಗೆ ವಿಜಯೇಂದ್ರ ಮಾತನಾಡಲಿ. ಕಲಬುರಗಿ ರಿಪಬ್ಲಿಕ್ ಅಂತೀರಾ ಐಪಿಎಲ್ ದಂಧೆ ಮಾಡ್ತೊರೋ ಶಾಸಕರು ಯಾರು? ಮರಳು ಆಫಿಯಾ ಮಾಡ್ತಿರೋದು ಯಾರು? ಇತಿಹಾಸ ತೆಗೆದು ನೋಡಿ ವಿಜಯೇಂದ್ರ ಮಾತನಾಡಲಿ ಎಂದು ಕಿಡಿಕಾರಿದರು.
ರಾಜು ಕುಪನೂರ್ ಬಿಜೆಪಿ ಎಸ್ ಸಿ ಸೆಲ್ ಅಧ್ಯಕ್ಷ ಆಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದಿದ್ದಾರೆ. ತನಿಖೆಯಾಗಲಿ. ಎಫ್ ಎಸ್ ಎಲ್ ವರದಿ ಬರಲಿ. ಮೊದಲು ನಾನು ಕೇಳಿದ ಪ್ರಶ್ನೆಗಳಿಗೆ ಬಿಜೆಪಿಯವರು ಉತ್ತರಿಸಲಿ ಎಂದು ಹೇಳಿದರು.