ಕಲಬುರಗಿ: ಬಿಜೆಪಿಯಲ್ಲಿ ಎರಡು ಬಣಗಳ ನಡುವೆಯೇ ಕಿತ್ತಾಟ ನಡೆದಿದೆ. ಬಿಜೆಪಿ ಕಾರ್ಯಕರ್ತರೇ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇಷ್ಟಾದರೂ ಯಾಕೆ ಅವರನ್ನು ಬಿಜೆಪಿ ನಾಯಕರು ಉಚ್ಛಾಟಿಸುತ್ತಿಲ್ಲ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ನಿಜವಾಗಿಯೂ ತಾಕತ್ತಿದ್ದರೆ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟಿಸಲಿ ಎಂದು ಸವಾಲು ಹಾಕಿದರು.
ಇದೇ ವೇಳೆ ಮುಸ್ಲಿಂಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ಹೇಳಿಕೆ ನೀಡಿದ್ದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಸ್ವಾಮೀಜಿಯವರಿಗೆ ಕಾನೂನು ಅನ್ವಯವಾಗಲ್ಲವೇ ಅಶೋಕ್ ಅವರೇ? ತಮ್ಮ ಹೇಳಿಕೆ ಬಗ್ಗೆ ಖುದ್ದು ಸ್ವಾಮೀಜಿಗಳೇ ವಿಷಾದ ವ್ಯಕ್ತಪಡಿಸಿದ್ದಾರೆ. ಇಷ್ಟಾದರೂ ಸ್ವಾಮೀಜಿಯವರ ಹೇಳಿಕೆಯನ್ನು ಬಿಜೆಪಿ ಸಮರ್ಥನೆ ಮಾಡುತ್ತಿದೆ. ಕಾನೂನು ಎಂದ್ರೆ ನಮಗೆ ಬೇರೆ, ನಿಮಗೆ ಬೇರೇನಾ? ಎಂದು ಪ್ರಶ್ನಿಸಿದ್ದಾರೆ.