
ಬೆಳಗಾವಿ: ಅನುಮತಿ ಸಿಕ್ಕರೆ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಅಳವಡಿಸಿದ ಸಾವರ್ಕರ್ ಫೋಟೋ ತೆಗೆದು ಹಾಕಲು ನಾನೇ ಸಿದ್ದವಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂತರ ಕಾಯ್ದುಕೊಂಡಿದ್ದಾರೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಇದು ಸದನ ಮತ್ತು ವಿಧಾನಸಭೆಯ ಅಧ್ಯಕ್ಷರಿಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸದನವು ಸಭಾಧ್ಯಕ್ಷರ ಸ್ವತ್ತು. ಈ ವಿಚಾರದಲ್ಲಿ ನಾನು ಸದ್ಯಕ್ಕೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.